ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯಲ್ಲಿನ ರೈತರು ಸಂಕಷ್ಟದಲ್ಲಿದ್ದಾರೆ,ಇಂಥ ಸಂದರ್ಭದಲ್ಲಿ ಸರ್ಕಾರ ರೈತರ ನೆರವಿಗೆ ಬರದೆ ಕಣ್ಣು ಕಿವಿ ಎಲ್ಲಾ ಮುಚ್ಚಿಕೊಂಡಿದೆ ಎಂದು ಬಿಜೆಪಿಯ ಮಾಜಿ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ್ ಮಾಗನೂರ ಆರೋಪಿಸಿದ್ದಾರೆ. ಗುರುವಾರ ಮಧ್ಯಾಹ್ನ ಯಾದಗಿರಿ ನಗರದ ಪತ್ರಿಕ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಬಿಜೆಪಿಯ ಜಿಲ್ಲಾಧ್ಯಕ್ಷ ಬಸವರಾಜಪ್ಪ ಗೌಡ ವಿಭೂತಿಹಳ್ಳಿ ಜಿಎಸ್‌ಟಿ ಕುರಿತು ಮಾತನಾಡಿದರು. ಮುಖಂಡರಾದ ರಾಚನಗೌಡ ಮುದ್ನಾಳ, ನಾಗರತ್ನ ಕುಪ್ಪಿ, ಪರಶುರಾಮ ಕುರುಕುಂದಿ ಇತರರು ಉಪಸ್ಥಿತರಿದ್ದರು.