ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಾವಗಡ ಶಾಸಕ ಹಾಗೂ ತುಮುಲ್ ಅಧ್ಯಕ್ಷ ಎಚ್.ವಿ. ವೆಂಕಟೇಶ್ ಭರ್ಜರಿ ಜಯ ಸಾಧಿಸಿದ್ದಾರೆ. ಒಟ್ಟು 20 ಮತಗಳಲ್ಲಿ ಕಾಂಗ್ರೆಸ್ ಪರವಾಗಿ 14 ಮತಗಳನ್ನು ಪಡೆದು, ಜೆಡಿಎಸ್ ಅಭ್ಯರ್ಥಿ ಎನ್.ಎ. ಈರಣ್ಣ ವಿರುದ್ಧ ಜಯಗಳಿಸಿ ನೂತನ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿ ನಾಯಿದ ಜಂ ಜಂ ಅವರಿಂದ ಪ್ರಮಾಣಪತ್ರ ಸ್ವೀಕರಿಸಿದ ವೆಂಕಟೇಶ್ ಅವರು, ನಂತರ ಮಾಜಿ ಸಚಿವರು ಕೆ.ಎನ್. ರಾಜಣ್ಣ, ವೆಂಕಟರಮಣಪ್ಪ, ತಿಪಟೂರು ಶಾಸಕರಾದ ಕೆ. ಷಡಕ್ಷರಿ ಮತ್ತು ವಿಧಾನಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದರು.