ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್.ರಮೇಶ್ ರವರು ಶನಿವಾರ ಮಧ್ಯಾಹ್ನ 3:30 ರ ಸುಮಾರಿಗೆ ನಗರ ಪಾಲಿಕೆ ವ್ಯಾಪ್ತಿಯ ಪಣತ್ತೂರು ಬಳಗೆರೆ ರಸ್ತೆ, ಬೃಹತ್ ರಾಜಕಾಲುವೆಗಳ ಪರಿಶೀಲನೆಯನ್ನು ನಡೆಸಿದರು. ಆಯುಕ್ತರ ನೇತೃತ್ವದಲ್ಲಿ ಪೂರ್ವ ನಗರ ಪಾಲಿಕೆಗೆ ಬರುವ ಹೈ ಡೆನ್ಸಿಟಿ ಕಾರಿಡಾರ್‌ಗಳಲ್ಲಿ ಪಾದಚಾರಿ ಮಾರ್ಗ ಒತ್ತುವರಿ, ಅನಧಿಕೃತ ಜಾಹೀರಾತು ಹೋರ್ಡಿಂಗ್ಸ್ ತೆರವು ಮತ್ತು ಅನಧಿಕೃತ ಕೇಬಲ್‌ಗಳ ತೆರವು ಕಾರ್ಯಾಚರಣೆಯನ್ನು ಬಿರುಸಿನಿಂದ ನಡೆಸಲಾಯಿತು.