ಆಟೋಮೋಟಿವ್ ಮಾಹಿತಿ ತಂತ್ರಜ್ಞಾನದಲ್ಲಿ ಹೊಸ ಎಂ.ಟೆಕ್ ಪ್ರೋಗ್ರಾಂ ಪ್ರಾರಂಭಿಸುವ ಬಗ್ಗೆ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಮತ್ತು ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯ ಒಪ್ಪಂದವೊಂದಕ್ಕೆ ಸಹಿ ಹಾಕಿವೆ. ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಕಂಪನಿಯ ಆವರಣದಲ್ಲಿ ಬುಧವಾರ ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯ (ಪಿಯು) ಜೊತೆ ತಿಳುವಳಿಕೆ ಪತ್ರವೊಂದಕ್ಕೆ (ಎಂಒಯು) ಸಹಿ ಹಾಕಿದೆ. ಈ ವೇಳೆ ಮಾತನಾಡಿದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್‌ನ ಹಣಕಾಸು ಮತ್ತು ಆಡಳಿತ ವಿಭಾಗದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಶಂಕರ್ ಮಾತನಾಡಿದರು.