ಸೆಪ್ಟೆಂಬರ್ 2, ಮಂಗಳವಾರ ಬೆಳಿಗ್ಗೆ 11:30ಕ್ಕೆ ತಾಲೂಕ ಪಂಚಾಯತಿಯ ಶ್ರೀ ಕಂಪಲಿರಾಯ ಸಭಾಂಗಣದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನೆರವೇರಿತು. ಈ ಸಭೆಯು ಕಂಪ್ಲಿ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ರಾವ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು.ಅಧ್ಯಕ್ಷ ಶ್ರೀನಿವಾಸ್ ರಾವ್ ಅವರು ಮಾತನಾಡಿ, “ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ನೇರವಾಗಿ ಸಾಮಾನ್ಯ ಜನರ ಬದುಕಿನಲ್ಲಿ ಬದಲಾವಣೆಯನ್ನು ತರಲು ಉದ್ದೇಶಿಸಲಾಗಿದೆ. ಯಾವುದೇ ಲಾಭಾರ್ಥಿ ಯೋಜನೆಗಳಿಂದ ವಂಚಿತರಾಗಬಾರದು. ಎಲ್ಲಾ ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು,” ಎ