ಸಾಲ ಬಾದೆಯಿಂದ ಯುವ ರೈತನೊಬ್ಬ ಆತ್ಮಹತ್ಯೆಗೆ ಶರಣಾದ ಪ್ರಕರಣ ತಾಲ್ಲೂಕಿನಲ್ಲಿ ಶನಿವಾರ ಬೆಳಕಿಗೆ ಬಂದಿದೆ. ಚಳ್ಳಕೆರೆ ತಾಲೂಕಿನ ಸಿದ್ದಾಪುರ ಗ್ರಾಮದ 32 ವರ್ಷದ ಕೃಷ್ಣಮೂರ್ತಿ ಸೊಸೈಟಿ ಹಾಗೂ ಕೈಗಡ ಸಾಲ ಮಾಡಿಕೊಂಡಿದ್ದು ಜಮೀನಿನಲ್ಲಿ ಈರುಳ್ಳಿ ಬೆಳೆ ನಷ್ಟದಿಂದ ಸಾಲ ತೀರಿಸಲಾಗದೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯ ನಂತರ ತಿಳಿಯಲಿದೆ.