ರಾಜ್ಯದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಯ ವಯೋಮಿತಿ ಸಡಿಲಿಕೆ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಗೃಹ ಸಚಿವ ಡಾ. ಜೀ ಪರಮೇಶ್ವರ್ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ಶುಕ್ರವಾರ ಮ,ಧ್ಯಾಹ್ನ ೩ ಗಂಟೆ ಸುಮಾರಿಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಬೇರೆ ರಾಜ್ಯಗಳಲ್ಲಿ ಪೊಲೀಸ್ ನೇಮಕಾತಿಗೆ ವಯೋಮಿತಿ ಎಷ್ಟು ವರ್ಷ ಇದೆ ಎಂಬುದನ್ನು ಪರಿಶೀಲನೆ ಮಾಡುತ್ತಿದ್ದೇವೆ. ಸುಮಾರು ವರ್ಷಗಳಿಂದ ಕಾನ‌್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ನಡೆದಿಲ್ಲ. ಎರಡು, ಮೂರು ವರ್ಷ ವಯೋಮಿತಿ ಹೆಚ್ಚಳ ಮಾಡಿಕೊಡುವಂತೆ ಬೇಡಿಕೆಯೂ ಇದೆ. ಈ ಬಗ್ಗೆ ಅನೇಕ ಸಂದರ್ಭಗಳಲ್ಲಿ ಯುವಕರು ನನ್ನನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ಕೊಟ್ಟಿದ್ದೇನೆ. ಪ್ರಸ