ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನ ಹಿನ್ನೆಲೆ ಸೇವಾ ಪಾಕ್ಷಿಕ ಅಭಿಯಾನದ ಅಡಿಯಲ್ಲಿ ಆಯೋಜಿಸಿರುವ ಹಗ್ಗ ಜಗ್ಗುವ ಸ್ಪರ್ಧೆಯನ್ನು ಗುರುವಾರ ಸಾಯಂಕಾಲ 4ಗಂಟೆ ಸುಮಾರಿಗೆ ಸಂಸದ ರಮೇಶ್ ಜಿಗಿಜಿಣಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನ ಹಿನ್ನೆಲೆ ಹಮ್ಮಿಕೊಂಡಿರುವ ಹಗ್ಗ ಜಗ್ಗಾಟ ಕಾರ್ಯಕ್ರಮದಲ್ಲಿ ಯುವಕರು ಭಾಗಿಯಾಗಿದ್ದು ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡಿದ ಗೌರವಾಯಿ ಎಂದು ಹೇಳಿದರು ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಸ್ ಕೆಬೆಳ್ಳುಬ್ಬಿ ಹಾಗೂ ಬಿಜೆಪಿ ಪಕ್ಷದ ಮುಖಂಡರುಗಳು ಭಾಗಿಯಾಗಿದ್ದರು.