ಮನೆಯೇ ಮೊದಲ ಶಾಲೆ ಎನ್ನುವುದು ಹೋಗಿ ಮೊಬೈಲೇ ಮೊದಲ ಶಾಲೆಯಂತಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಮಾತನಾಡಿದರು. ಭಾನುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಪ್ರೆಸ್ ಕ್ಲಬ್ ಮತ್ತು ಬಾಲ ಭವನ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ "ಮಕ್ಕಳ ಜಾತ್ರೆ" ಸಾಂಸ್ಕೃತಿಕ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಗರಗಳಲ್ಲಿ ಇರುವ ಮಕ್ಕಳು ಮಣ್ಣಿನಿಂದ ಬೇರ್ಪಟ್ಟು, ನೆಲದ ಆಟ ಪಾಠಗಳಿಂದ ದೂರ ಆಗಿದ್ದಾರೆ. ವೃದ್ದಾಶ್ರಮಗಳು ಹೆಚ್ಚಾಗುತ್ತಾ ಅಜ್ಜ-ಅಜ್ಜಿ ಕತೆಗಳಿಂದ ಮಕ್ಕಳು ವಂಚಿತರಾಗುತ್ತಿದ್ದಾರೆ. ಜೊತೆಗೆ ತಮ್ಮ ಆಟದ ಸಾಮಾನುಗಳನ್ನು ತಾವೇ ಸೃಷ್ಟಿಸಿಕೊಳ್ಳುವ ಕ್ರಿಯಾಶೀಲತೆಯೂ ಕಾಣೆಯಾಗಿದೆ.