ರಾಯಚೂರು ನಗರದಲ್ಲಿ ಬುಧವಾರ ಮಧ್ಯಾನ ಮುಸ್ಲಿಂ ಸಮುದಾಯದ ಮುಖಂಡರು ಹಾರ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಅಬ್ದುಲ್ ಐರೋಜ್ ಸುದ್ದಿಗೋಷ್ಠಿ ನಡೆಸಿ ಸೆಪ್ಟೆಂಬರ್ 13ರಂದು ಅಲ್ಪಸಂಖ್ಯಾತರ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು. ರಾಯಚೂರು ನಗರದ ಪಂಡಿತ ಸಿದ್ದರಾಮಯ್ಯ ರಂಗಮಂದಿರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾದ ಅಲ್ಹಾಜ್ ನಸೀರ್ ಅಹ್ಮದ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು