ರೈತರ ಜಮೀನಿನ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಬೀದಿಗಿಳಿದು ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಬೈರಮಂಗಲ ಗ್ರಾಮದಲ್ಲಿ ಶುಕ್ರವಾರ ಬೈರಮಂಗಲ- ಕಂಚುಗಾರನಹಳ್ಳಿ ಗ್ರಾಮ ಪಂಚಾಯತಿಗಳ ರೈತರ ಹಿತರಕ್ಷಣಾ ಸಂಘದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ನಮ್ಮ ಭೂಮಿ ನಮ್ಮ ಹಕ್ಕು ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.