ಕೆ.ಆರ್.ಪೇಟೆ ತಾಲೂಕಿನ ವಿಠಲಾಪುರ ಗ್ರಾಮದ ಬಳಿ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಜಗದೀಶ್ ಮೇಲೆ ಬೈಕ್ ಸವಾರರು ಹಲ್ಲೆ ನಡೆಸಿರುವ ಘಟನೆ ಜರುಗಿದೆ. ಕೆ.ಆರ್.ಪೇಟೆಯಿಂದ ಸಂಗಾಪುರ ಗ್ರಾಮಕ್ಕೆ ತೆರಳುತ್ತಿದ್ದ ಬಸ್ ಅನ್ನು ಅಡ್ಡಗಟ್ಟಿ, ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಜಗದೀಶ್ ಮೇಲೆ ಕ್ಷುಲ್ಲಕ ಕಾರಣಕ್ಕೆ ಕಲ್ಲಿನಿಂದ ಹೊಡೆದು ಗಾಯಗೊಳಿಸಿದ್ದಾರೆ. ಗಾಯಗೊಂಡ ಕಂಡಕ್ಟರ್ ಜಗದೀಶ್ ಅವರನ್ನು ಅಕ್ಕಪಕ್ಕದ ಸಾರ್ವಜನಿಕರು ಕೆ.ಆರ್.ಪೇಟೆ ಸಕರ್ಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಭಾನುವಾರ ಸಂಜೆ 6 ಗಂಟೆಯಲ್ಲಿ ಪ್ರಕರಣ ದಾಖಲಾಗಿದೆ.