ಜಿಲ್ಲೆಯಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆಯನ್ನು ಪರಿಹರಿಸಲು ಶೀಘ್ರದಲ್ಲೇ 150 ಹೊಸ ಟವರ್‌ಗಳನ್ನು ನಿರ್ಮಾಣ ಮಾಡುವುದಕ್ಕೆ ಕೇಂದ್ರ ದೂರ ಸಂಪರ್ಕ ಇಲಾಖೆ ಅನುಮೋದನೆ ನೀಡಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಶನಿವಾರ ನಗರದಲ್ಲಿ ಸಭೆ ಬಳಿಕ 12 ಗಂಟೆ ವೇಳೆಗೆ ತಿಳಿಸಿದ್ದಾರೆ.ನಗರದ ಬಿಎಸ್‌ಎನ್‌ಎಲ್ ಕಚೇರಿ ಸಭಾಂಗಣದಲ್ಲಿ ನಡೆದ ಬಿಎಸ್‌ಎನ್‌ಎಲ್ ಅಧಿಕಾರಿಗಳು ಹಾಗೂ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ನೆಟ್ವರ್ಕ್ ಸಮಸ್ಯೆ ಹೆಚ್ಚಾಗಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಚಿವ ಜ್ಯೋತಿರಾಧ್ಯ ಸಿಂಧ್ಯ ಅವರಿಗೆ ಮನವಿ ಸಲ್ಲಿಸಲಾಗಿತ್ತು.ನಮ್ಮ ಮನವಿ ಪುರಸ್ಕರಿಸಿ 150 ಟವರ್‌ಗಳ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ. ಇದು ಜಾರಿಯಾದರೆ ನೆಟ್‌ವರ್ಕ್ ಸಮಸ್ಯೆ ಬಹುತೇಕ ಮಟ್ಟಿಗೆ ಕಡಿ