ಗಣೇಶೋತ್ಸವ ವೇಳೆ ಮದ್ದೂರು ಸೇರಿ ಕೆಲವು ಕಡೆ ಕಲ್ಲು ತೂರಾಟ ಹಾಗೂ ಇತರೆ ಪ್ರಕರಣಗಳು ನಡೆದಿರುವ ಹಿನ್ನೆಲೆ ಸೋಮವಾರ ಬೆಳಗ್ಗೆ 11:30 ರ ಸುಮಾರಿಗೆ ಸದಾಶಿವನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಮದ್ದೂರಿನಲ್ಲಿ ಗಲಾಟೆ ಮಾಡಿದವರ ಬಂಧನ ಆಗಿದೆ. ಕೆಲವು ಕಡೆ ಸಣ್ಣಪುಟ್ಟ ಘಟನೆ ಆಗಿವೆ. ಒಂದು ಕಡೆ ಚಿಕ್ಕಮಕ್ಕಳು ಮೆರವಣಿಗೆ ವೇಳೆ ಮೇಲಿಂದ ಉಗಿದಿದ್ದಾರೆ. ಎಲ್ಲವೂ ನಿಯಂತ್ರಣದಲ್ಲಿದೆ. ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ. ಪದೇ ಪದೇ ಈ ಥರ ಘಟನೆಗಳಾಗ್ತಿವೆ ಅಂದ್ರೆ ಜನರೂ ಸಹ ಸ್ಪಂದಿಸಬೇಕು. ಪೊಲೀಸರು ಈಗಾಗಲರೆ ಈ ಪ್ರಕರಣಗಳ ಕುರಿತು ಕಾನೂನು ಪ್ರಕಾರ ಕ್ರಮ ಕೈಗೊಂಡಿದ್ದಾರೆ ಎಂದರು.