ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದಲ್ಲಿ ಸೌಜನ್ಯ ಪರ ಹೋರಾಟಗಾರರಾದ ಗಿರೀಶ್ ಮಟ್ಟಣ್ಣವರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸರು ರವಿವಾರ ಮತ್ತೊಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಟ್ಟಣ್ಣನವರ್ ಮತ್ತು ತಿಮರೋಡಿ ಸಮಾಜದ ಸೌಹಾರ್ದ ವಾತಾವರಣ ಕದಡಲು ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಪ್ರಯತ್ನಿಸಿದ್ದಾರೆ ಎಂದು ಧರ್ಮಸ್ಥಳ ಗ್ರಾಮದ ಪ್ರವೀಣ್ ಕೆ.ಆರ್ ದೂರು ನೀಡಿದ್ದಾರೆ.