ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳಬೇಕು ಮತ್ತು ನಿಗದಿಪಡಿಸಿದ ಅವಧಿಯೊಳಗೆ ಸಾರ್ವಜನಿಕರ ಬಳಕೆಗೆ ಲಭ್ಯವಾಗುವಂತೆ ಅಧಿಕಾರಿಗಳು ನಿಗಾ ವಹಿಸಬೇಕು ಹಾಗೂ ಗ್ರಾಮಸ್ಥರೂ ಕೂಡ ಕಾಮಗಾರಿ ಸರಿಯಾಗಿ ನಡೆಯುವಂತೆ ನಿಗಾ ವಹಿಸಿ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಸಲಹೆ ನೀಡಿದರು. ದಾವಣಗೆರೆ ತಾಲ್ಲೂಕಿನ ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹೊನ್ನನಾಯಕನಹಳ್ಳಿ ಗ್ರಾಮಕ್ಕೆ ಸೋಮವಾರ ಭೇಟಿ ನೀಡಿ ಕೊಡಗನೂರು ಕ್ರಾಸ್‌ನಿಂದ ಭಾವಿಹಾಳು ಗ್ರಾಮದ ಗಡಿಯವರೆಗೂ ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ರಸ್ತೆ ಅಭಿವೃದ್ಧಿ ಮಾಡಬೇಕೆಂದು ಈ ಭಾಗದ ಗ್ರಾಮಸ್ಥರ ಬೇಡಿಕೆಯಾಗಿತ್ತು ಎಂದರು.