ಸದಾಶಿವಗಡದ ಜೈ ದುರ್ಗಾಮಾತಾ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಲ್ಲಿ ತಮ್ಮ ಹಣ ಕಳೆದುಕೊಂಡಿರುವ ನೂರಾರು ಗ್ರಾಹಕರು ನ್ಯಾಯಕ್ಕಾಗಿ ಹೋರಾಟ ಆರಂಭಿಸಿದ್ದಾರೆ. ಗಾಂಧಿ ಜಯಂತಿಯೊಳಗೆ ಸಂಸ್ಥೆಯ ಮುಖ್ಯಸ್ಥ ಲಿಂಗರಾಜು ಪುತ್ತು ಕಲ್ಗುಟ್ಕರ ಮತ್ತು ಇತರ ಸಂಬಂಧಿತ ವ್ಯಕ್ತಿಗಳನ್ನು ಬಂಧಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರಿಗೆ ಗುರುವಾರ ಸಂಜೆ 4ಕ್ಕೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ. ಈ ವಂಚನೆಯಿಂದ ಸುಮಾರು 600ಕ್ಕೂ ಹೆಚ್ಚು ಗ್ರಾಹಕರು 54 ಕೋಟಿ ರೂ. ಹಣ ಕಳೆದುಕೊಂಡಿದ್ದಾರೆ. ಈ ಬಗ್ಗೆ ಕ್ರಮಕೈಗೊಳ್ಳುವಂತೆ ಕೋರಿದ್ದಾರೆ.