ದೊಡ್ಡಬಳ್ಳಾಪುರ ಕುಡಿಯಲು ನೀರು ತರಲು ಹೋಗಿ ನೀರು ತೆಗೆದುಕೊಂಡು ವಾಪಸ್ ಬರುವ ವೇಳೆ ರೈಲು ಡಿಕ್ಕಿಯಾಗಿ ಯುವಕ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಶಟ್ಟಿ ಹಳ್ಳಿ ಕೈಗಾರಿಕಾ ಪ್ರದೇಶದ ವೀರಪುರ ಬಳಿ ನಡೆದಿದೆ ಮೃತ ಯುವಕನನ್ನು ಪಶ್ಚಿಮ ಬಂಗಾಳದ ಮೂಲದ 23 ವರ್ಷದ ರಾಜಮಹಂತಿ ಎಂದು ಗುರುತಿಸಲಾಗಿದ್ದು ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ