ಚಿತ್ರದುರ್ಗ ಜಿಲ್ಲೆಯ ಹಲವು ತಂಬಾಕು ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಿಧಿಸಲಾಗಿದೆ. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಚಿತ್ರದುರ್ಗ ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಹತ್ತಿರ ಮತ್ತು ಹೊಸದುರ್ಗ ತಾಲ್ಲೂಕಿನ ಬಾಗೂರು ಹಾಗೂ ಮಲ್ಲಪ್ಪನಹಳ್ಳಿ ಗ್ರಾಮಗಳಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ತಂಬಾಕು ತನಿಖಾ ತಂಡವು ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ಭೇಟಿ ನೀಡಿ, ದಂಡ ವಿಧಿಸಿದೆ.