ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ನಡೆದ ಸ್ವಾತಂತ್ರೋತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ ಜಿ ಎಸ್ ಟಿ ಯಲ್ಲಿ ಮುಂದಿನ ಪೀಳಿಗೆಯ ಸುಧಾರಣೆಗಳನ್ನು ತರುವ ಬಗ್ಗೆ ದೇಶಕ್ಕೆ ವಾಗ್ದಾನ ನೀಡಿದಂತೆ ಜಿಎಸ್‌ಟಿ ಕಡಿತ ಮಾಡುವ ಮೂಲಕ ದೇಶದ ಜನರಿಗೆ ದಸರಾ ಉಡುಗೊರೆ ನೀಡಿದ್ದಾರೆ ಎಂದು ಮಾಜಿನಗರ ಪಾಲಿಕಾ ಸದಸ್ಯರಾದ ಮಾ ವಿ ರಾಮಪ್ರಸಾದ್ ತಿಳಿಸಿದ್ದಾರೆ. ನಗರದ ಚಾಮುಂಡಿಪುರಂ ವೃತ್ತದಲ್ಲಿ ಅಪೂರ್ವ ಸ್ನೇಹ ಬಳಗ ವತಿಯಿಂದ ಸರಕು ಮತ್ತು ಸೇವಾ ತೆರಿಗೆಯ ವ್ಯವಸ್ಥೆಯಲ್ಲಿನ ಜಿಎಸ್‌ಟಿ ಹಂತಗಳನ್ನು ಕಡಿಮೆ ಮಾಡಿ ಮಹತ್ವದ ಬದಲಾವಣೆಗಳನ್ನು ಕೇಂದ್ರ ಸರ್ಕಾರದ ಮಹತ್ವದ ನಿರ್ಣಯಕ್ಕೆ ಸ್ವಾಗತಿಸಿ ಸಾರ್ವಜನಿಕರಿಗೆ ಹಾಗೂ ಗ್ರಾಹಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು