ರಿಲಯನ್ಸ್ ಸ್ಮಾರ್ಟ್ ಬಜಾರ್‌ನಲ್ಲಿ ಕಳಪೆ ಪದಾರ್ಥ ಪತ್ತೆ ಹಾಸನ ನಗರ ಬಿಎಂ ರಸ್ತೆಯಲ್ಲಿರುವ ರಿಲಯನ್ಸ್ ಸ್ಮಾರ್ಟ್ ಬಜಾರ್‌ನಲ್ಲಿ ಕಳಪೆ ಹಾಗೂ ಅವಧಿ ಮೀರಿದ ಆಹಾರ ಪದಾರ್ಥಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು.ಜಿಲ್ಲಾ ಅಂಕಿತ ಅಧಿಕಾರಿ ಡಾ. ಶಶಿಧರ್ ಹಾಗೂ ಹಾಸನ ತಾಲ್ಲೂಕು ಆಹಾರ ಸುರಕ್ಷತಾ ಅಧಿಕಾರಿ ಡಾ. ವಿಜಯ್‌ಗೊರೂರು ಅವರ ನೇತೃತ್ವದಲ್ಲಿ ನಡೆದ ಪರಿಶೀಲನೆಯಲ್ಲಿ ಕೊಳೆತ ಸೇಬು ಹಣ್ಣು, ಈರುಳ್ಳಿ, ಹೂಕೋಸು, ಕೊಬ್ಬರಿ ಜೊತೆಗೆ ಅವಧಿ ಮೀರಿದ ಪರೋಟ ಪತ್ತೆಯಾಯಿತು. ಸ್ಥಳದಲ್ಲಿದ್ದ ಕೆಲ ಆಹಾರ ಪದಾರ್ಥಗಳನ್ನು ಅಧಿಕಾರಿಗಳು ಪರೀಕ್ಷೆಗಾಗಿ ಕೊಂಡೊಯ್ದರು. ಬಳಿಕ ಮಳಿಗೆ ನಿರ್ವಾಹಕರಿಗೆ ನೋಟೀಸ್ ನೀಡಲಾಗಿದ್ದು, ಮು