೧೧ನೇ ದಿನದ ಗಣಪತಿ ಮೂರ್ತಿ ವಿಸರ್ಜನೆಯ ಸಂದರ್ಭದಲ್ಲಿ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ಪೊಲೀಸರಿಂದ ನಡೆದ ಲಾಠಿ ಪ್ರಹಾರದಿಂದ ಗಾಯಗೊಂಡ ಗ್ರಾಮಸ್ಥರನ್ನು ಶನಿವಾರ ಸಂಜೆ 5 ಗಂಟೆಗೆ ಭೇಟಿ ಮಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕ್ಷೇಮ ವಿಚಾರಿಸಿ, ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇದೇ ವೇಳೆ ಮಾತನಾಡಿದ ಕೇಂದ್ರ ಸಚಿವರು, ಮಕ್ಕಳಿಂದ ಹಿಡಿದು ಊರಿನ ಹಿರಿಯ ಗ್ರಾಮಸ್ಥರು ಗಾಯವಾಗುವಂತೆ ಪೊಲೀಸರು ಹಲ್ಲೆ ನಡೆಸಿರುವ