ಹನೂರು: ಹನೂರು ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮನ ದೇವಾಲಯದ ಬಡಾವಣೆಯಲ್ಲಿ ಗಣೇಶ ಚತುರ್ಥಿ ಹಿನ್ನಲೆಯಲ್ಲಿ ಬುಧವಾರದಂದುಗಣೇಶನ ಪ್ರತಿಷ್ಠಾಪನೆ ಹಾಗೂ ವಿಶೇಷ ಪೂಜೆಗಳು ಶ್ರದ್ಧಾಭಕ್ತಿಯಿಂದ ನೆರವೇರಿದವು. ಈ ದೇವಾಲಯದಲ್ಲಿ ಕಳೆದ 30 ರಿಂದ 40 ವರ್ಷಗಳಿಂದ ನಿರಂತರವಾಗಿ ಗಣೇಶ ಚತುರ್ಥಿಯಂದು ವಿಘ್ನೇಶ್ವರನ ಪ್ರತಿಷ್ಠಾಪನೆ ನಡೆಯುತ್ತಿದ್ದು, ಈ ಪರಂಪರೆಯನ್ನು ಮುಂದುವರಿಸುತ್ತಾ ಈ ವರ್ಷವೂ ಬುಧವಾರ ಬೆಳಿಗ್ಗೆ ಗಣೇಶನ ಪ್ರತಿಷ್ಠಾಪನೆ ನೆರವೇರಿಸಲಾಯಿತು. ಬಳಿಕ ಸಾಂಪ್ರದಾಯಬದ್ಧ ರೀತಿಯಲ್ಲಿ ವಿವಿಧ ಪೂಜಾ ಆರ್ಚನೆಗಳು ಜರುಗಿದವು.