ಬಾಗಲಕೋಟ ಜಿಲ್ಲೆಯ ಇಳಕಲ್ ತಾಲೂಕಿನ ಹಿರೇಓತಗೇರಿ ಗ್ರಾಮದಲ್ಲಿ ಶ್ರೀವಿಜಯ ಮಹಾಂತ ಶಿವಯೋಗಿಗಳ ಭಾವಚಿತ್ರದ ಮೆರವಣಿಗೆ ಭಜನೆಯೊಂದಿಗೆ ಭಕ್ತಿ ಭಾವದಿಂದ ಅಗಸ್ಟ ೨೫ ಮುಂಜಾನೆ ೧೦ ಗಂಟೆಗೆ ನಡೆಯಿತು. ಶ್ರಾವಣ ಮಾಸದ ಕೊನೆಯ ಸೋಮವಾರದಂದು ಶ್ರೀವಿಜಯ ಮಹಾಂತ ಶಿವಯೋಗಿಗಳ ಮಠದಿಂದ ಆರಂಭವಾದ ಭಾವಚಿತ್ರದ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ನಡೆಯಿತು. ಈ ಸಮಯದಲ್ಲಿ ಗ್ರಾಮದ ಸದ್ದಬಕ್ತರು ಇದ್ದರು.