ಕರ್ನಾಟಕ ರಾಜ್ಯದಲ್ಲಿ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಸಹಿತ ಇಲ್ಲಿಯವರೆಗೆ ಅತಿಥಿ ಉಪನ್ಯಾಸಕರ ನೇಮಕಾತಿ ಆಗದೆ ಇರುವ ಕಾರಣ ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯ ತರಗತಿಗಳು ನಡೆಯುತ್ತಿಲ್ಲ ಎಂದು ಎಭಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಸಾವಿರಾರು ವಿದ್ಯಾರ್ಥಿನಿಯರು ಮುಖ್ಯಮಂತ್ರಿ ಸಿದ್ಧರಾಮಯ್ಯನವರ ವಿರುದ್ಧ ಧಿಕ್ಕಾರ ಕುಗುತ್ತಾ ಪ್ರತಿಭಟನಾ ರ್ಯಾಲಿಯನ್ನು ನಡೆಸಿದರು.