ಕಲಬುರಗಿ : ಕಲಬುರಗಿ ಜಿಲ್ಲೆಯಾದ್ಯಂತ ಈ ಬಾರಿ ಅತಿವೃಷ್ಟಿಯಿಂದ ಸಾಕಷ್ಟು ಪ್ರಮಾಣದಲ್ಲಿ ಬೆಳೆ ಹಾನಿಯಾಗಿದ್ದು, ಜಮೀನಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಾದ ಪರಿಣಾಮ ಸಮೀಕ್ಷೆಗೆ ಅಡ್ಡಿಯಾಗ್ತಿರೋ ಹಿನ್ನಲೆಯಲ್ಲಿ ಡ್ರೋಣ್ ಕ್ಯಾಮರಾ ಮೂಲಕ ಬೆಳೆ ಹಾನಿ ಸಮೀಕ್ಷೆಗೆ ಕೃಷಿ ಇಲಾಖೆ ಮುಂದಾಗಿದೆ. ಸೆ3 ರಂದು ಬೆಳಗ್ಗೆ 7.30 ಕ್ಕೆ ಮಾಹಿತಿ ಲಭ್ಯವಾಗಿದೆ.. ಕೃಷಿ, ತೋಟಗಾರಿಕೆ ಮತ್ತು ಕಂದಾಯ ಇಲಾಖೆ ಜಂಟಿಯಾಗಿ ಸಮೀಕ್ಷೆ ಕೈಗೆತ್ತಿಕೊಳ್ಳಲಾಗಿದ್ದು, ಉದ್ದು, ಹೆಸರು, ತೊಗರಿ, ಹತ್ತಿಣ ಸೂರ್ಯಕಾಂತಿ ಸೇರಿದಂತೆ ಅನೇಕ ಬೆಳೆಗಳು ನಾಶವಾಗಿವೆ.