ಕಲಬುರಗಿ ಜಿಲ್ಲೆಯ ಕಾಳಗಿ ತಾಲ್ಲೂಕಿನ ಕಂದಗೂಳ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಗೆ ಹೋಗುವ ಮುಖ್ಯರಸ್ತೆ ಸಂಪೂರ್ಣ ಹದಗಟ್ಟಿದೆ. ಮಳೆ ನೀರು-ಕೊಳಚೆ ನೀರು ತುಂಬಿ ಹಾವು-ಜಂತುಗಳ ಭೀತಿ ಹೆಚ್ಚಾಗಿದ್ದು, ನೂರಾರು ವಿದ್ಯಾರ್ಥಿಗಳು ಪ್ರತಿದಿನ ನರಕಯಾತನೆ ಅನುಭವಿಸುತ್ತಿದ್ದಾರೆ. ತುರ್ತು ಸಂದರ್ಭದಲ್ಲೂ ವೈದ್ಯರು ಬರುವುದೇ ಕಷ್ಟ. ಹಲವು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ತಕ್ಷಣವೇ ರಸ್ತೆ ದುರಸ್ತಿ ಮಾಡಬೇಕೆಂದು ಶೆನಿವಾರ 4 ಗಂಟೆಗೆ ಗ್ರಾಮಸ್ಥರು ಹಾಗೂ ಪೋಷಕರು ಒತ್ತಾಯಿಸಿದ್ದಾರೆ.