ಒಳ ಮೀಸಲಾತಿ ಸಂಬಂಧ ಅಲೆಮಾರಿ ಸೇರಿದಂತೆ ಅತಿ ಹಿಂದುಳಿದ ಸಮುದಾಯಗಳಿಗೆ ಅನ್ಯಾಯವಾಗಿದೆ. ಕೂಡಲೇ ಮೀಸಲಾತಿಗೆ ತಿದ್ದುಪಡಿ ತಂದು ಸರಿಪಡಿಸಲು ಸರ್ಕಾರ ಮುಂದಾಗಬೇಕು ಎಂದು ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆಯ ಅಧಿವೇಶನ ಮುಗಿಯುವ ಕೊನೆ ವೇಳೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಶಿಷ್ಠ ಜಾತಿ ಸಮುದಾಯದ ಒಳಮೀಸಲಾತಿಗೆ ತಾರ್ಕಿಕ ಮತ್ತು ತಾತ್ವಿಕ ಅಂತ್ಯ ನೀಡುರುವುದಾಗಿ ಹೇಳಿಕೆ ನೀಡಿದ್ದಾರೆ. ಅದಕ್ಕೆ ಪೂರಕವಾಗಿ ಆ.25ರಂದು ಆದೇಶ ಹೋರಡಿಸಿದ್ದು, ಆದೇಶದಲ್ಲಿ ಯಾವುದೇ ತಾರ್ಕಿಕ ಮತ್ತು ತಾತ್ವಿಕ ಅಂಶಗಳು ಕಾಣುತ್ತಿಲ್ಲ. ಒಳಮೀಸಲಾತಿ ಸಂಬಂಧ ನಾಗಮೋಹನ್‌ದಾಸ್ ಅವರು 5 ವರ್ಗಗಳನ್ನಾಗಿ ವಿಂಗಡಿಸಿದ್ದಾರೆ ಎಂದರು.