ದಾಂಡೇಲಿ : ಪವಿತ್ರ ಧಾರ್ಮಿಕ ಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಹಾಗೂ ಕ್ಷೇತ್ರದ ಧರ್ಮಾಧಿಕಾರಿಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ಮತ್ತು ಅಪಪ್ರಚಾರ ಮಾಡುತ್ತಿರುವವರ ಮೇಲೆ ಸೂಕ್ತ ರೀತಿಯ ಕಾನೂನು ಕ್ರಮವನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ದಾಂಡೇಲಿಯ ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತವೃಂದದ ವತಿಯಿಂದ ಇಂದು ಮಂಗಳವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ಅಂಬೇವಾಡಿಯ ಶ್ರೀ ಮಹಾಗಣಪತಿ ದೇವಸ್ಥಾನದ ಮುಂಭಾಗದಿಂದ ತಾಲೂಕು ಆಡಳಿತ ಸೌಧದವರೆಗೆ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಯಿತು.