ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ತನಿಖೆ ಮುಂದುವರಿದಿದೆ. ಸಾಕ್ಷಿ ದೂರುದಾರನಾಗಿ ಬಂದ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಬುಧವಾರ ಮುಕ್ತಾಯವಾಗುತ್ತಿದ್ದು, ಬುಧವಾರ ಆತನನ್ನು ಬೆಳ್ತಂಗಡಿ ನ್ಯಾಯಾಲಯದ ಮುಂದೆ ಎಸ್.ಐ.ಟಿ ಅಧಿಕಾರಿಗಳು ಹಾಜರು ಪಡಿಸಲಿದ್ದಾರೆ. ಸಾಕ್ಷಿ ದೂರುದಾರನಾಗಿ ಬಂದಿದ್ದ ಚಿನ್ನಯ್ಯನನ್ನು ಆ. 23 ರಂದು ಎಸ್.ಐ.ಟಿ ತಂಡ ಆತ ತಂದಿದ್ದ ಬುರುಡೆಯ ವಿಚಾರದಲ್ಲಿ ಬಂಧಿಸಿದ್ದರು. ಅದೇದಿನ ಆತನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆ.3 ರ ವರೆಗೆ ಆತನನ್ನು ಎಸ್.ಐ.ಟಿ ವಶಕ್ಕೆ ಒಪ್ಪಿಸಿ ಆದೇಶ ನೀಡಿತ್ತು.