ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬಿ ಆರ್ ಪಿ ಯಲ್ಲಿರುವ ಭದ್ರಾ ಜಲಾಶಯಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಶುಕ್ರವಾರ ಬಾಗಿನ ಅರ್ಪಿಸಿದರು ದಾವಣಗೆರೆಯ ಉಸ್ತುವಾರಿ ಸಚಿವರು ಹಾಗೂ ಶಾಸಕರಾದಂತಹ ಮಲ್ಲಿಕಾರ್ಜುನ್ ಹಾಗೂ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಕಲ ಗೌರವ ಸಲ್ಲಿಸಲಾಯಿತು.