ಗುಂಡ್ಲುಪೇಟೆ ತಾಲೂಕಿನ ಕೋಡಹಳ್ಳಿ ಗ್ರಾಮಕ್ಕೆ ಮೂಲಭೂತ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪುತ್ತನಪುರ ಗ್ರಾಮ ಪಂಚಾಯತಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಪುತ್ತನಪುರ ಗ್ರಾಮ ಪಂಚಾಯತಿ ಕಾರ್ಯಾಲಯದ ಮುಂಭಾಗ ಜಮಾಯಿಸಿದ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಚುನಾಯಿತ ಆಡಳಿತ ವರ್ಗ ಹಾಗೂ ಪಿಡಿಓ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.