ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗಣಿಹಾರ ಗ್ರಾಮದಲ್ಲಿ ಮಹಿಳೆಯನ್ನು ಅರೆಬೆತ್ತಲೆ ಮಾಡಿ ಎರಡು ತುಂಡುಗಳಾಗಿ ಕತ್ತರಿಸಿ ಬಾವಿಯಲ್ಲಿ ಎಸಗಿರುವ ವ್ಯಕ್ತಿಯನ್ನು ಪೊಲೀಸ್ ಇಲಾಖೆ ಅಧಿಕಾರಿಗಳು ಕೂಡಲೇ ಬಂಧಿಸಬೇಕು. ಇಂತಹ ಘಟನೆ ಇಡೀ ಮಾನವ ಕುಲವೇ ತಲಿತಗ್ಗಿಸುವಂಥಾಗಿದೆ, ಈ ರೀತಿಯ ಹತ್ಯೆ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ಮುಂದೆ ಅಂತಹ ಘಟನೆ ಆಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ವಿಜಯಪುರದಲ್ಲಿ ಬುಧವಾರ ಸಾಯಂಕಾಲ 4ಗಂಟೆ ಸುಮಾರಿಗೆ ರೈತ ಸಂಘಟನೆಯ ಮುಖಂಡ ಸಂಗಮೇಶ್ ಸಾಗರ್ ಮಾಧ್ಯಮ ಮೂಲಕ ಅಧಿಕಾರಿಗಳಿಗೆ ಮನವಿ ಮಾಡಿದರು.