ಮೊಳಕಾಲ್ಮೂರು ತಾಲೂಕಿನ ಕೊಂಡ್ಲಹಳ್ಳಿ ವಲಯ ಮಟ್ಟದ 2025-26 ನೇ ಸಾಲಿನ ಫ್ರೌಡಶಾಲೆಗಳ ಕ್ರೀಡಾಕೂಟವನ್ನು ಬಿಜಿಕೆರೆ ಗ್ರಾಮದ ಶ್ರೀ ಬಸವೇಶ್ವರ ಗ್ರಾಮಾಂತರ ಫ್ರೌಡಶಾಲೆಯಲ್ಲಿ ಆಯೋಜಿಸಲಾಗಿತ್ತು. ಕ್ರೀಡಾಕೂಟಕ್ಕೆ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಮಂಡಳಿಯ ಅಧ್ಯಕ್ಷರಾದ ಡಾ.ಬಿ.ಯೋಗೇಶ್ ಬಾಬು ರವರು ಉದ್ಘಾಟಿಸಿದರು, ಈ ವೇಳೆ ಮಾತನಾಡಿದ ಅವರು,ವಿದ್ಯಾರ್ಥಿಗಳು ಹೆಚ್ಚು ಕ್ರೀಡಾಕೂಟದಲ್ಲಿ ಭಾಗಿಯಾಗುವುದರಿಂದ ದೈಹಿಕ ಸದೃಢವಾಗುದಲ್ಲದೇ ಬೌದ್ಧಿಕ ಸಾಮರ್ಥ್ಯ ಹೆಚ್ಚಾಗಲಿದೆ.ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾಭ್ಯಾಸಕ್ಕೆ ಎಷ್ಟು ಮಹತ್ವ ಇದೆಯೋ ಅಷ್ಟೇ ಮಹತ್ವ ಕ್ರೀಡೆಗೂ ಪ್ರಾಶಸ್ಥ್ಯವಿದೆ. ಕ್ರೀಡೆಗಳಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುತ್ತದೆ.