ಬಾಗೇಪಲ್ಲಿ ತಾಲ್ಲೂಕಿನ ನಲ್ಲಪರೆಡ್ಡಿಪಲ್ಲಿ ಚಂದ್ರಶೇಖರರೆಡ್ಡಿ ಸುಮಾರು 50 ವರ್ಷಗಳಿಂದ ಸಿ ಪಿಐಎಂ ಪಕ್ಷದ ತಾಲ್ಲೂಕು ಸಮಿತಿ ಸದಸ್ಯರಾಗಿ, ನಲ್ಲಪರೆಡ್ಡಿಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಕರಾಗಿ, ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಕಾರ್ಯದರ್ಶಿಯಾಗಿ ಶ್ರಮಿಸಿದವರು. ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಅತ್ಯಂತ ಸರಳ ವ್ಯಕ್ತಿತ್ವದ ಸಂಗಾತಿ ಅನಾರೋಗ್ಯ ನಿಮಿತ್ತ ನಿಧನರಾಗಿದ್ದು, ಅವರ ನಿಧನಕ್ಕೆ ಸಿಪಿಐಎಂ ಪಕ್ಷದ ರಾಜ್ಯ ಸಮಿತಿ ಸದಸ್ಯ ಎಂಪಿ ಮುನಿವೆಂಕಟಪ್ಪ ಮತ್ತಿತರರು ಸಂತಾಪ ಸೂಚಿಸಿದ್ದಾರೆ.