ಹಳೇ ದ್ವೇಷದ ಹಿನ್ನಲೆ ಮನೆಗೆ ನುಗ್ಗಿದ ನಾಲ್ವರು ವ್ಯಕ್ತಿಯ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಥಳಿಸಿ ನಾಪತ್ತೆಯಾದ ಘಟನೆ ತಾಲೂಕಿನ ಚೆನ್ನಪಟ್ಟಣ ಗ್ರಾಮದಲ್ಲಿ ನಡೆದಿದೆ. ಈ ಘಟನೆ ನಡೆದು ನಾಲ್ಕು ದಿನಗಳಾದರೂ ಹುಲ್ಲಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲವೆಂದು ಹಲ್ಲೆಗೊಳಗಾದ ವ್ಯಕ್ತಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆಯಲ್ಲಿ ಶಿವರಾಜು(38) ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದಾರೆ.