ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಠಾಧೀಶರು ಭೇಟಿ ನೀಡುತ್ತಿರುವುದು ಒಳ್ಳೆಯ ಸಂಗತಿ ಎಂದು ಸಚಿವ ಸಂತೋಷ ಲಾಡ್ ತಿಳಿಸಿದರು. ಧಾರವಾಡ ನಗರದಲ್ಲಿ ಶನಿವಾರ ಮದ್ಯಾಹ್ನ 2 ಗಂಟೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣವನ್ನು ಎನ್.ಐ.ಎ.ಗೆ ಕೊಡಬೇಕು ಎಂದು ಒತ್ತಾಯ ಮಾಡುವ ಅಧಿಕಾರ ಎಲ್ಲರಿಗೂ ಇದೆ. ಆದರೆ ಸರ್ಕಾರ ಏನು ಮಾಡಬೇಕು ಎಂಬುದನ್ನು ಸರ್ಕಾರ ನಿರ್ಧಾರ ಮಾಡುತ್ತದೆ. ಸ್ವಾಮೀಜಿಗಳು ಸರ್ಕಾರಕ್ಕೆ ಏನಾದರೂ ಸಲಹೆ ಕೊಡಬೇಕಿದ್ದರೆ