ಕೆಜಿಎಫ್ ನಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯ ನೂತನ ಕಟ್ಟಡ ಹಾಗೂ ಆಧುನಿಕ ಸ್ವಯಂಚಾಲಿತ ವಾಹನ ಚಾಲನಾ ಪರೀಕ್ಷಾ ಪಥದ ಉದ್ಘಾಟನೆಯನ್ನು ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಗುರುವಾರ ಮಧ್ಯಾಹ್ನ 2 ಗಂಟೆಯಲ್ಲಿ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕ ಎಸ್. ಎನ್. ನಾರಾಯಣಸ್ವಾಮಿ, ಕೆ.ಜಿ.ಎಫ್ ಶಾಸಕ ರೂಪ ಶಶಿಧರ್, ಮಾಜಿ ಶಾಸಕ ಎಂ. ನಾರಾಯಣಸ್ವಾಮಿ, ಸೇರಿದಂತೆ ಅನೇಕ ಜನಪ್ರತಿನಿಧಿಗಳು, ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಮುಖಂಡರು ಉಪಸ್ಥಿತರಿದ್ದರು.