ಹಿರಿಯೂರು, ಸೆಪ್ಟೆಂಬರ್. 13 : ಕ್ರೀಡೆಗಳಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ. ಕಲಿಕೆಯೊಂದಿಗೆ ಕ್ರೀಡೆಗೂ ಪ್ರಾಮುಖ್ಯತೆ ನೀಡುವ ಮೂಲಕ ಜೀವನದಲ್ಲಿ ಯಶಸ್ಸು ಗಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅಭಿಪ್ರಾಯಪಟ್ಟರು. ನಗರದ ತಾಲೂಕು ಕ್ರೀಡಾಂಗಣದಲ್ಲಿ 2025-26ನೇ ಸಾಲಿನ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿ, ಮಾತನಾಡಿದರು.