ಭದ್ರಾವತಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವುದನ್ನ ವಿರೋಧಿಸಿ ಶಿವಮೊಗ್ಗದಲ್ಲಿ ಹಿಂದೂಪರ ಸಂಘಟನೆಯ ಮುಖಂಡರುಗಳು ಪ್ರತಿಭಟನೆಯನ್ನು ನಡೆಸಿದ್ದಾರೆ. ಬುಧವಾರ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ದೇಶದ್ರೋಹಿ ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಹ ನೀಡಿದರು.