ದಾಂಡೇಲಿ : ನಗರಸಭೆಯ ಸಭಾಂಗಣದಲ್ಲಿ ಶಾಸಕ ಆರ್.ವಿ.ದೇಶಪಾಂಡೆಯವರ ಅಧ್ಯಕ್ಷತೆಯಲ್ಲಿ ಆಶ್ರಯ ಸಮಿತಿ ಸಭೆಯು ಸೋಮವಾರ ಸಂಜೆ 4:00 ಗಂಟೆ ಸುಮಾರಿಗೆ ಜರುಗಿತು. ಸಭೆಯಲ್ಲಿ ವಸತಿ ಯೋಜನೆಗಳ ಕುರಿತು ಹಾಗೂ ನಿವೇಶನಗಳಿಗೆ ಸುರಕ್ಷಿತ ರಸ್ತೆ ಸಂಪರ್ಕ ಕಲ್ಪಿಸುವ ಕುರಿತು ಪ್ರಸ್ತಾಪಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ವಸತಿ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ಆರ್.ವಿ.ದೇಶಪಾಂಡೆಯವರು ನೀಡಿದರು. ಸಭೆಯಲ್ಲಿ ನಗರಸಭೆ ಅಧ್ಯಕ್ಷರು,ಉಪಾಧ್ಯಕ್ಷರು, ಆಶ್ರಯ ಸಮಿತಿ ಸದಸ್ಯರು, ತಹಶೀಲ್ದಾರ್, ನಗರಸಭೆಯ ಪೌರಾಯುಕ್ತರು, ಮುಖ್ಯಾಧಿಕಾರಿಗಳು ಮತ್ತು ವಸತಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.