ಕೇಂದ್ರ ಸರ್ಕಾರದ ಜಿಎಸ್‌ಟಿ ಸರಳೀಕರಣದಿಂದ ರೈತರಗೆ, ಸಾಮಾನ್ಯ ಜನರಿಗೆ ಅನುಕೂಲ ಆಗಿದೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರು ಹೇಳಿದರು. ದಾವಣಗೆರೆ ನಗರದಲ್ಲಿ ಶುಕ್ರವಾರ ಸಂಜೆ 5 ಗಂಟೆಗೆ ಸುದ್ದಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾನ್ಯ ಜನರು ಬಳಸುವ ದಿನನಿತ್ಯದ ವಸ್ತುಗಳಿಗೆ ಜಿಎಸ್‌ಟಿ ಸರಳೀಕರಣವಾಗಿದ್ದು, ಕಾರ್ ಕೂಡ ಕೊಳ್ಳಬಹುದು. ಜಿಎಸ್‌ಟಿ ಸರಳೀಕರಣದಿಂದ ರಾಜ್ಯಕ್ಕೆ 17 ಸಾವಿರ ಕೋಟಿ ರೂ ನಷ್ಟವಾಗಲಿದೆ ಎಂದು ಕಾಂಗ್ರೆಸ್‌ನವರು ಹೇಳುತ್ತಾರೆ. ಕೇಂದ್ರಕ್ಕೆ ಎಷ್ಟು ನಷ್ಟ ಆಗಲಿದೆ ಎಂಬುದು ಅವರಿಗೆ ಗೊತ್ತಾ ಎಂದು ಪ್ರಶ್ನಿಸಿದರು.