ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಗಂಗಾವತಿ ರಸ್ತೆಯಲ್ಲಿರುವ ರಾಮ ಕಿಶೋರ್ ಕಾಲೋನಿಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ಶ್ರೀ ವರಸಿದ್ಧಿ ವಿನಾಯಕ ಸ್ವಾಮಿಯ 15ನೇ ವರ್ಷದ ನವರಾತ್ರಿ ಉತ್ಸವ ಹಾಗೂ ಅವರ ಸಿದ್ದಿ ವಿನಾಯಕ ಸೇವಾ ಸಮಿತಿಯ 40ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸೇವಾ ಸಮಿತಿಯ ಸದಸ್ಯ ಎನ್ ಶಿವ ಮಾಹಿತಿಯನ್ನು ನೀಡಿದ್ದಾರೆ.