ಕೊಂಗಂಡಿ ಗ್ರಾಮದಲ್ಲಿ ಕುಡಿಯುವ ನೀರಿನ ಬಾವಿ ಮುಚ್ಚಿದ್ದು ಜಾಗ ಒತ್ತುವರಿ ಮಾಡಿದವರ ಮೇಲೆ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕೊಂಗಂಡಿ ಗ್ರಾಮದಲ್ಲಿ ಸರ್ವೆ ನಂಬರ್ 12/6 ರಲ್ಲಿರುವ 03 ಗುಂಟೆ ಜಮೀನಿನಲ್ಲಿ ಕುಡಿಯುವ ನೀರಿನ ಬಾವಿ ಇದ್ದು , ಗ್ರಾಮದ ಕೆಲವರು ಬಾವಿ ಮುಚ್ಚಿದ್ದು , ಕುಡಿಯುವ ನೀರಿಗಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಪರದಾಡುತ್ತಿದ್ದಾರೆ, ಕೂಡಲೇ ಬಾವಿ ಮುಚ್ಚಿದ ಗುಂಡಗಳ ಮೇಲೆ ಕಟಿಣ ಕ್ರಮ ಜರುಗಿಸಿ ಸಂಬಂಧಪಟ್ಟ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಜಿಲ್ಲಾ ಪಂಚಾಯತಿ ಕಚೇರಿ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣ್ಣದಿಂದ ಬೃಹತ್ ಪ್ರತಿಭಟನೆ