ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ. ಹಾಗೂ ಕನಕಪುರ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖಾಂತರ ಶುಕ್ರವಾರ ಕನಕಪುರದ ಅಂಬೇಡ್ಕರ್ ಭವನದಲ್ಲಿ ಕೆ.ಸಿ.ಸಿ. ಬೆಳೆಸಾಲ, ಸ್ತ್ರೀ ಶಕ್ತಿ ಸಹಾಯ ಸಂಘ ಮತ್ತು ಸಾಕಾಣಿಕೆ ಸಾಲ ವಿತರಣಾ ಸಮಾರಂಭದಲ್ಲಿ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿ ಯಾವುದೇ ಒಳ್ಳೆಯ ಕಾರ್ಯಕ್ರಮ ಆರಂಭವಾಗುತ್ತದೆ ಎಂದರೆ ಅದು ಕನಕಪುರದಿಂದ ಪ್ರಾರಂಭವಾಗಿ ಇಡೀ ರಾಜ್ಯಕ್ಕೆ ಕಾರ್ಯಕ್ರಮವಾಗುತ್ತದೆ ಎಂದರು.