ಮದ್ದೂರಿನಲ್ಲಿ ಗಣೇಶೋತ್ಸವ ವೇಳೆ ಗಲಾಟೆ ವಿಚಾರಕ್ಕೆ ಸಂಬಂಧಿಸಿ ಮಲ್ಲೇಶ್ವರಂ ಬಳಿ ಸೋಮವಾರ ಮಧ್ಯಾಹ್ನ 12:30 ರ ಸುಮಾರಿಗೆ ಮಾಧ್ಯಮಗಳ ಜೊತೆ ಮಾತನಾಡಿದ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಅವರು, ನಾವು ಪಾಕಿಸ್ತಾನದಲ್ಲಿವೋ ಕರ್ನಾಟಕದಲ್ಲಿದ್ದೀವೋ ಎಂಬ ಭ್ರಮೆ ಮೂಡುತ್ತಿದೆ, ತಿಮರೋಡಿ ಗ್ಯಾಂಗ್ ಸಿದ್ದರಾಮಯ್ಯನ ಸುತ್ತ ಸುತ್ತಿಕೊಂಡಿದ್ದಾರೆ. ಧರ್ಮಸ್ಥಳ, ಚಾಮುಂಡೇಶ್ವರಿ ಆಯ್ತು ಈಗ ಮದ್ದೂರು. ಈ ಘಟನೆಗೆ ನೇರ ಕಾರಣ ಸರ್ಕಾರದ ಕುಮ್ಮಕ್ಕು. ಸಾರ್ವಜನಿಕ ರಸ್ತೆ, ಇವರ ಅಪ್ಪನ ಆಸ್ತೀನಾ? ನಾವು ಟ್ಯಾಕ್ಸ್ ಕೊಟ್ಟಿರುವುದು.ಇವರ ಯೋಗ್ಯತೆಗೆ ಅಲ್ಲಿ ಒಂದು ಮೀಸಲು ಪಡೆ ಇಟ್ಟಿದ್ದರೆ ಲಾಠಿ ಚಾರ್ಜ್ ಅವಶ್ಯಕತೆ ಇತ್ತಾ..? ಹಿಂದೂಗಳ ಮೇಲೆ ಲಾಠಿ ಚಾರ್ಜ್, ದುಷ್ಕರ್ಮಿಗಳಿಗೆ ಯಾಕೆ ಬಡಿದಿಲ್ಲ..?