ಗುಂಡಾರ್ಲಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಅಭಯ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಬುಧವಾರ ರಾತ್ರಿ ಕಳ್ಳತನವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.ತಾಲ್ಲೂಕಿನ ಕಾಮಸಮುದ್ರ ಹೋಬಳಿಯ ಗುಂಡಾರ್ಲಹಳ್ಳಿ ಗ್ರಾಮದಲ್ಲಿರುವ ಅಭಯ ಆಂಜನೇಯಸ್ವಾಮಿ ದೇವಾಲಯದಲ್ಲಿ ಬಾಗಿಲು ಮುರಿದು ಹುಂಡಿಗೆಯಲ್ಲಿ ಇದ್ದಂತಹ ಹಣವನ್ನು ಮತ್ತು ಕಳಶಗಳನ್ನು ಕಳವು ಮಾಡಿದ್ದು, ಕಾಮಸಮುದ್ರ ಪೋಲಿಸ್ ರು ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ,ಇತ್ತೀಚೆಗೆ ಗಡಿ ಭಾಗದಲ್ಲಿನ ಗ್ರಾಮಗಳಲ್ಲಿ ಸರಣಿ ಕಳ್ಳತನ ಪ್ರಕರಣಗಳು ಬೆಳಕಿಗೆ ಬರುತ್ತಿದ್ಧು ಸುತ್ತಲೂ ಗ್ರಾಮದ ಜನರು ಆತಂಕಗೊಂಡಿದ್ದಾರೆ.