ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸುವ ಪೋಷಕರಿಗೆ ಮಾತ್ರ ಗ್ಯಾರಂಟಿ ಯೋಜನೆಗಳನ್ನು ಕೊಡಬೇಕು. ಅಂತಹ ಯೋಜನೆ ಜಾರಿಯಾಗಬೇಕು ಎಂದು ಶಾಸಕ ಕೆ.ಎಸ್.ಬಸವಂತಪ್ಪ ಪುನರುಚ್ಛಾರ ಮಾಡಿದರು. ಸೋಮವಾರ ಬೆಳಿಗ್ಗೆ 11 ಗಂಟೆಗೆ ದಾವಣಗೆರೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 14 ಮತ್ತು 17 ವರ್ಷ ವಯೋಮಿತಿಯ ಬಾಲಕ, ಬಾಲಕಿಯರ ತಾಲ್ಲುಕು ಮಟ್ಟದ ಕ್ರೀಡಾ ಕೂಟ ಉದ್ಘಾಟಿಸಿ ಮಾತನಾಡಿದರು. ದಾವಣಗೆರೆ ನಗರದಲ್ಲಿ ಅಂತರ್ ರಾಷ್ಟ್ರೀಯ ಕ್ರೀಡಾಂಗಣ ಅವಶ್ಯಕತೆ ಇದ್ದು, ಈ ಕುರಿತು ಮುಖ್ಯಮಂತ್ರಿಗಳ ಜೊತೆ ಮಾತನಾಡಲಾಗುವುದು. ತಾಲ್ಲೂಕು ಮಟ್ಟದ ಕ್ರೀಡಾ ಕೂಟ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯ ಎಂದರು.