ರಾಯಚೂರು ನಗರದಲ್ಲಿ ಸೋಮವಾರ ಬೆಳಗಿನ ಜಾವ ತೀನ್ ಖಂದಿಲ್ ವೃತ್ತದ ಬಳಿ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಡಿ.ಜೆ ಹಾಡಿಗೆ ಕುಣಿಯುತ್ತಿದ್ದ ಯುವಕ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಅಭಿಷೇಕ ಎನ್ನುವ 24 ವರ್ಷದ ಯುವಕ ಮಂಗಳವಾರ ಪೇಟೆ ಬಡಾವಣೆಯ ನಿವಾಸಿ ಮೆರವಣಿಗೆಯಲ್ಲಿ ನೃತ್ಯ ಮಾಡುತ್ತಿದ್ದಾಗ ಎದೆ ನೋವು ಕಾಣಿಸಿಕೊಂಡು ಬಿದ್ದಿದ್ದಾನೆ ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರು ವೈದ್ಯರು ಹೃದಯಘಾತದಿಂದ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ. ಯುವಕನ ಸಾವಿನಿಂದ ಕುಟುಂಬಸ್ಥರು ಆಕ್ರಂದನ ವ್ಯಕ್ತಪಡಿಸಿದರು. ರಾಯಚೂರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ