ಮದ್ದೂರು ಗಲಭೆ ಹಾಗೂ ಭದ್ರಾವತಿಯಲ್ಲಿ ದೇಶದ್ರೋಹಿ ಘೋಷಣೆ ಕೂಗಿರುವುದನ್ನ ವಿರೋಧಿಸಿ ಶಿವಮೊಗ್ಗ ನಗರದಲ್ಲಿ ರಾಷ್ಟ್ರಭಕ್ತ ಬಳಗದ ವತಿಯಿಂದ ಬುಧವಾರ ಪ್ರತಿಭಟನೆಯನ್ನು ನಡೆಸಲಾಯಿತು. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.